×
Ad

ಕಾಂಗ್ರೆಸ್ ನಾಯಕರ ಬಗ್ಗೆ ತೇಜೋವಧೆ ಆರೋಪ : ಬಿಜೆಪಿ ಐಟಿ ಸೆಲ್ ಮುಖಂಡನ ವಿರುದ್ಧ ದೂರು

Update: 2024-03-23 20:17 IST

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಸಂದೇಶ ಹಾಗೂ ಸುಳ್ಳು ಬರಹಗಳನ್ನು ಪ್ರಕಟಿಸುತ್ತಿದ್ದ ಆರೋಪದಡಿ ಬಿಜೆಪಿ ಐಟಿ ಸೆಲ್ ಮುಖಂಡನ ವಿರುದ್ಧ ಇಲ್ಲಿನ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಯಂತ್ ಶೆಟ್ಟಿ ಎಂಬಾತನ ವಿರುದ್ಧ ಕಾಂಗ್ರೆಸ್ ಮುಖಂಡ ಪ್ರಕಾಶ್ ಹಾಗೂ ಕಾರ್ಯಕರ್ತರು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕಲಾಸಿಪಾಳ್ಯ ವಿನೋಬನಗರ ನಿವಾಸಿಯಾಗಿರುವ ಜಯಕಾಂತ ಶೆಟ್ಟಿ, ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದಲ್ಲದೆ, ಧಾರ್ಮಿಕ ಅಲ್ಪಸಂಖ್ಯಾತರು ನಮ್ಮ ದೇಶದವರಲ್ಲ, ಸೋನಿಯಾ ಗಾಂಧಿಯವರಿಂದಲೇ ಶ್ರೀಲಂಕಾದಲ್ಲಿ ಎರಡು ಕೋಟಿ ಜನ ಮರಣ ಹೊಂದಿದ್ದಾರೆ ಎಂದು ಮಾತನಾಡಿದ್ದಾರೆ. ಇದು ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಲ್ಲದೆ, ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವಂತಹ ಹೇಳಿಕೆ ಆಗಿದ್ದು, ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News