×
Ad

ಲೈಂಗಿಕ ದೌರ್ಜನ್ಯ ಆರೋಪ | ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲು

Update: 2024-06-22 19:10 IST

ಹಾಸನ: ಲೈಂಗಿಕ ಹಗರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣರ ಬಳಿಕ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಇದೀಗ ಸಂತ್ರಸ್ತ ಯುವಕ ಹಾಸನದ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಾಗಿದೆ.

ನಿನ್ನೆ(ಜೂ.21) ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದ ಸಂತ್ರಸ್ಥ, ದೂರು ನೀಡುವಾಗಲೇ ಹಾಸನ ಎಸ್‌ಪಿ ಗೆ ದೂರಿನ ಪ್ರತಿ ಮೇಲ್ ಮಾಡಿದ್ದರು. ಇದರ ಜೊತೆಗೆ ಮೇಲ್ ಮಾಡಿದ್ದ ಬಗ್ಗೆಯೂ ವೀಡಿಯೋ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಸಂಬಂಧ ಶನಿವಾರ ಹಾಸನದ ಜಿಲ್ಲಾ ಪೊಲೀಸ್ ಕಚೇರಿಗೆ ಸಂತ್ರಸ್ತ ಯುವಕ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ. ಜಿಲ್ಲಾ ಪೊಲೀಸ್ ಕಚೇರಿಗೆ ಬಂದ ದೂರನ್ನು, ಅಧಿಕಾರಿಗಳನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಿದ್ದಾರೆ. ದೂರಿನ ಸತ್ಯಾಸತ್ಯತೆಗಾಗಿ ದೂರುದಾರನನ್ನು ಸಂಪರ್ಕ ಮಾಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News