×
Ad

ಆಸ್ಪತ್ರೆಯಲ್ಲಿ ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸಿಬ್ಬಂದಿ ಸೆರೆ

Update: 2023-09-07 23:55 IST

ಬೆಂಗಳೂರು, ಸೆ.7: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಲ್ಯಾಬ್ ಟೆಕ್ನಿಷಿಯನ್‍ನನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಹೆಬ್ಬಾಳ ಖಾಸಗಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಅನಾರೋಗ್ಯ ಹಿನ್ನೆಲೆ ಸೆ.3ರಂದು ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಸಿಟಿ ಸ್ಕ್ಯಾನ್ ಮಾಡಲು ಸೂಚಿಸಿದ್ದರಿಂದ ಪರೀಕ್ಷೆ ಒಳಗಾಗಲು ವೃದ್ಧೆ ಹೋಗಿದ್ದರು. ಈ ವೇಳೆ, ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಅಶೋಕ್ ಕಾರ್ಯ ನಿರ್ವಹಿಸುತ್ತಿದ್ದ. ಆರೋಪಿ ಪರೀಕ್ಷೆ ನೆಪದಲ್ಲಿ ವೃದ್ಧೆಯ ಎದೆ ಹಾಗೂ ಹೊಟ್ಟೆ ಭಾಗವನ್ನು ಮುಟ್ಟಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ವೃದ್ಧೆಗೆ ಏನೋ ನೆಪ ಹೇಳಿದ್ದಾನೆ. ಕೆಲ ಕ್ಷಣಗಳ ಬಳಿಕ ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದರಿಂದ ಹೆದರಿ ಹೊರಬಂದ ವೃದ್ಧೆಗೆ ಈ ಬಗ್ಗೆ ಯಾರಿಗೂ ಹೇಳದಂತೆ ಅಶೋಕ್ ಬೆದರಿಕೆ ಹಾಕಿದ್ದಾನೆ. ಈ ಘಟನೆ ಸಂಬಂಧ ಲ್ಯಾಬ್‍ನಲ್ಲಿ ನಡೆದ ವಿಷಯವನ್ನು ವೃದ್ಧೆ ಗಂಡನಿಗೆ ತಿಳಿಸಿದ್ದಾರೆ. ಈ ಸಂಬಂಧ ನೀಡಿದ ದೂರಿನ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಎಂದು ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News