ಸಾಂದರ್ಭಿಕ ಚಿತ್ರ | Image by magnific

ಬೆಂಗಳೂರು: ಆರೆಸ್ಸೆಸ್ ವಿರುದ್ಧ ಮಾನಹಾನಿ ಆರೋಪದ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಖಾಸಗಿ ದೂರು ಆಧರಿಸಿ ಸಂಜ್ಞೆ ಪರಿಗಣಿಸಿದ್ದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶಕ್ಕೆ ವಿಶೇಷ ನ್ಯಾಯಾಲಯವು ಬುಧವಾರ ತಡೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ.ಶಿವಪ್ರಸಾದ್ ಪ್ರಕರಣಕ್ಕೆ ತಡೆ ನೀಡಿ ದೂರುದಾರ ತೇಜಸ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಜೂನ್ 27ರಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ದೂರುದಾರ ತೇಜಸ್ ದೂರಿನನ್ವಯ ಸಂಜ್ಞೆ ಪರಿಗಣಿಸಿ ಆದೇಶ ಮಾಡಿತ್ತು.

ಇದನ್ನು ಪ್ರಿಯಾಂಕ್ ಖರ್ಗೆ, ನಲಪಾಡ್ ಹಾಗೂ ದಿನೇಶ್ ಗುಂಡೂರಾವ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಆದರೆ ಹೈಕೋರ್ಟ್ ಈ ವಿಚಾರವನ್ನ ಸತ್ರ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಪ್ರಕರಣಕ್ಕೆ ತಡೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor