ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಕಷ್ಟ : ಎಚ್.ಡಿ.ದೇವೇಗೌಡ
ಎಚ್.ಡಿ.ದೇವೇಗೌಡ
ಬೆಂಗಳೂರು : ನಗರ, ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಬಿಜೆಪಿ ಜತೆಗಿನ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಶುಕ್ರವಾರ ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರಿಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಕಷ್ಟವಾಗಲಿದೆ. ನಮ್ಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದು ಅವರು ಉಲ್ಲೇಖಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, ಈ ವಿಚಾರದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಅವರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದೂ ಅವರು ಉಲ್ಲೇಖಿಸಿದರು.