×
Ad

ಕರ್ನಾಟಕಕ್ಕೆ ಸ್ಪಂದಿಸದೆ ಮೋದಿಯಿಂದ ಸದಾ ಪಲಾಯನ: ಸಿಎಂ ಸಿದ್ದರಾಮಯ್ಯ

Update: 2024-01-16 20:03 IST

ಬೆಂಗಳೂರು: ‘ಪ್ರಧಾನಿ ಮೋದಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗೆ ಅದೇ ಪ್ರಮುಖ ತೊಂದರೆ. ಎದ್ದೇಳಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಂಗಳವಾರ ʼಎಕ್ಸ್‌ʼ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ. ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ ಎಂದು ಟೀಕಿಸಿದ್ದಾರೆ.

‘ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ. ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ. ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ. ಮೋದಿ ಮಂತ್ರವಿಷ್ಟೇ ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು... ಮತ್ತದನ್ನೇ ಪುನರಾವರ್ತಿಸು. ಇನ್ನು ಬಿಜೆಪಿ ಸಂಸದರ ಮಂತ್ರ. ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು!’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News