×
Ad

ಅಮರನಾಥ ಯಾತ್ರೆ | ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಲು ನೆರವು: ಸಿಎಂ ಸಿದ್ದರಾಮಯ್ಯ

Update: 2023-07-08 19:13 IST

ಬೆಂಗಳೂರು, ಜು. 8: ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯ ಎಲ್ಲ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಗದಗನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿಲೋಮೀಟರ್ ದೂರದಲ್ಲಿರುವ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News