×
Ad

ʼಅಮಿತ್ ಶಾಗೆ ಹುಚ್ಚು ನಾಯಿ ಕಚ್ಚಿದೆʼ: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

Update: 2024-12-21 19:04 IST

ಪ್ರಿಯಾಂಕ್ ಖರ್ಗೆ , ಅಮಿತ್ ಶಾ | PTI 

ಕಲಬುರಗಿ: ಬಿ ಆರ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದು, ‘ಅವರಿಗೆ ಹುಚ್ಚು ನಾಯಿ ಕಚ್ಚಿದೆ’ ಎಂದು ಹೇಳಿದ್ದಾರೆ.

ಈ ಕುರಿತು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು, ‘ಏಳು ಜನ್ಮದಲ್ಲಿ ದೇವರ ನಾಮಸ್ಮರಣೆ ಮಾಡಿದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ, ಆದರೆ ಈ ಜನ್ಮದಲ್ಲಿ ಅಂಬೇಡ್ಕರ್ ನಾಮ ಜಪಿಸಿದರೆ ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆ ಮತ್ತು ಸ್ವಾಭಿಮಾನದ ಜೀವನ ಸಿಗುತ್ತದೆ ಎಂದು ಹೇಳಿದ್ದಾರೆ.

ಅಂಬೇಡ್ಕರ್ ಮತ್ತು ಸಮಾನತೆ ಅವರ ಚಿಂತನೆಗಳಲ್ಲಿ ಇಲ್ಲದಿರುವುದು ಅವರ ಸಮಸ್ಯೆಯಾಗಿದೆ. ಈ ವಿಷಯಗಳು ಅವರ ತತ್ವಶಾಸ್ತ್ರ ಮತ್ತು ಸಿದ್ಧಾಂತದಲ್ಲಿಲ್ಲ . ಅಂಬೇಡ್ಕರ್ ಮತ್ತು ಬಸವ ತತ್ವಗಳು ಹೆಚ್ಚಾದಷ್ಟು ಆರೆಸ್ಸೆಸ್ ಸಿದ್ಧಾಂತಗಳು ತಳಹದಿಗೆ ಬರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಅಂಬೇಡ್ಕರ್ ಹೆಸರನ್ನು ಪದೇ ಪದೇ ಹೇಳುವ ಬದಲು ದೇವರ ಹೆಸರನ್ನು ಅಷ್ಟು ಬಾರಿ ಹೇಳಿದ್ದರೆ, ಏಳು ಜನ್ಮದ ಸ್ವರ್ಗ ಪ್ರಾಪ್ತಿಯಾಗಿರುತ್ತಿತ್ತು” ಎಂದು ಮಂಗಳವಾರ ಕಾಂಗ್ರೆಸ್ ಸದಸ್ಯರನ್ನುದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಇದರ ಬೆನ್ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News