×
Ad

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ

Update: 2024-02-05 19:25 IST

ಅಮಿತ್ ಶಾ | Photo: PTI  

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲಿದ್ದು, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಠಾಧೀಪತಿಗಳೊಂದಿಗೆ ಸಮಾಲೋಚನೆ ನಡೆಸಲಿರುವ ಅಮಿತ್ ಶಾ, ಜೆಡಿಎಸ್ ಮುಖಂಡರೊಂದಿಗೆ ಲೋಕಸಭೆ ಸೀಟು ಹಂಚಿಕೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಫೆ.9 ಮತ್ತು 10ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ, ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಫೆ. 10ರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಅತಿಥಿಗೃಹ ಉದ್ಘಾಟಿಸಲಿದ್ದಾರೆ ಎಂದು ಗೊತ್ತಾಗಿದೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ. ಕೇಂದ್ರ ಸಚಿವ ಪ್ರಹ್ಲಾದ್ ಜೊಶಿ, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News