×
Ad

ಮೊರಾರ್ಜಿ ಶಾಲೆಗಳಿಂದ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರೆತಿದೆ : ಸಿಎಂಗೆ ಧನ್ಯವಾದ ಅರ್ಪಿಸಿದ ಎಸೆಸೆಲ್ಸಿ ಟಾಪರ್ ಅಂಕಿತಾ ಬಸಪ್ಪ

Update: 2024-06-13 21:46 IST

Photo : x/@KarnatakaVarthe

ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿವೆ ಎಂದು ಅವರು ಬಣ್ಣಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಂಕಿತಾರನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನಿಸಿದ್ದಲ್ಲದೆ, ಮುಂದಿನ ಶಿಕ್ಷಣಕ್ಕೆ ಬೆಂಬಲ ನೀಡುವುದಾಗಿಯೂ ಘೋಷಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News