×
Ad

ಅನ್ನಭಾಗ್ಯ ‘ನೇರ ನಗದು’: ಸೋಮವಾರ ಚಾಲನೆ

Update: 2023-07-09 23:29 IST

ಸಿಎಂ ಸಿದ್ದರಾಮಯ್ಯ 

ಬೆಂಗಳೂರು: ರಾಜ್ಯದಲ್ಲಿ 1.28 ಕೋಟಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರು ಇದ್ದಾರೆ. ಇದರಲ್ಲಿ ಶೇ.99 ರಷ್ಟು ಕಾರ್ಡುಗಳು ಆಧಾರ್ ಜೋಡಣೆ ಹೊಂದಿವೆ ಎಂದು ರಾಜ್ಯ ಸರಕಾರ ತಿಳಿಸಿದೆ.

ಶೇ.82 ರಷ್ಟು ಪಡಿತರ ಚೀಟಿಗಳು ಅಂದರೆ 1.06 ಕೋಟಿ ಪಡಿತರ ಚೀಟಿಗಳು. ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಜೋಡಣೆಯಾಗಿವೆ. ಈ ಕಾರ್ಡುದಾರರ ಖಾತೆಗಳಿಗೆ ನಗದು ವರ್ಗಾವಣೆ ಮಾಡಲಾಗುವುದು. ಉಳಿದ ಕಾರ್ಡುದಾರರಿಗೆ ಖಾತೆ ತೆರೆಯಲು ಮಾಹಿತಿ ನೀಡಲಾಗುವುದು.

1.27 ಕೋಟಿ ಕಾರ್ಡುಗಳಲ್ಲಿ ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥರೆಂದು ಗುರುತಿಸಲಾಗಿದ್ದು ಅವರ ಖಾತೆಗೆ ನಗದು ವರ್ಗಾಯಿಸಲಾಗುವುದು. ಶೇ.94 ರಷ್ಟು ಕುಟುಂಬಗಳ ಮುಖ್ಯಸ್ಥರು ಮಹಿಳೆಯರು ಹಾಗೂ ಶೇ.5 ರಷ್ಟು ಕುಟುಂಬಗಳಿಗೆ ಪುರುಷ ಮುಖ್ಯಸ್ಥರಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಜು.೧೦ರಂದು ಚಾಲನೆ: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ(ಜು.10) ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ನಾಳೆ ಸಂಜೆ 5ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ನಗದು ನೀಡುವ ಯೋಜನೆಯನ್ನು ಸಿಎಂ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News