×
Ad

ರಾಜಕೀಯ ಹೊಂದಾಣಿಕೆ ಸಾಬೀತುಪಡಿಸಿದರೆ ನಿವೃತ್ತಿ ಘೋಷಿಸುವೆ: ಸಿಎಂ ಸಿದ್ದರಾಮಯ್ಯ ಸವಾಲು

Update: 2023-07-12 17:22 IST

ಬೆಂಗಳೂರು, ಜು.12: ನಾನು ವಿರೋಧ ಪಕ್ಷದಲ್ಲಿದ್ದಾಗ ಯಾವುದೇ ಸಚಿವರ ಮನೆಗೆ ಹೋಗಿದ್ದಾಗಲಿ, ಹೊಂದಾಣಿಕೆ ಮಾಡಿಕೊಂಡಿದ್ದಾಗಲಿ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಸುದೀರ್ಘ ರಾಜಕೀಯ ಜೀವನದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಅಲ್ಲದೆ, 1983 ರಿಂದ ಸದನದಲ್ಲಿದ್ದೇನೆ, ನನ್ನ ಜತೆ ಸದನಕ್ಕೆ ಬಂದವರಲ್ಲಿಬಿ.ಆರ್.ಪಾಟೀಲ್, ದೇಶ ಪಾಂಡೆ ಬಿಟ್ಟು ಬೇರೆಯವರು ಇಲ್ಲ. ಅಂದಿನಿಂದ ಇಲ್ಲಿಯವರೆಗೆ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಸಿದ್ದರಾಮಯ್ಯ ನುಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News