ಆರ್‌ಸಿಬಿ, ಕೆಎಸ್‍ಸಿಎ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಫ್ರಾಂಚೈಸಿ, ಕೆಎಸ್‍ಸಿಎ ಮತ್ತು ಡಿಎನ್‍ಎ ಸಂಸ್ಥೆಯ ವಿರುದ್ಧ ಇಲ್ಲಿನ ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿವೆ.
ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ನೀಡಿದ ದೂರಿನನ್ವಯ ಆರ್‌ಸಿಬಿ ಫ್ರಾಂಚೈಸಿ, ಕೆಎಸ್‍ಸಿಎ ಮತ್ತು ಡಿಎನ್‍ಎ ಸಂಸ್ಥೆಯ ಅಧಿಕಾರಿಗಳ ಮೇಲೆ ಬಿಎನ್‍ಎಸ್ ಸೆಕ್ಷನ್ 125(ಎ) ಅಡಿಯಲ್ಲಿ ಪ್ರಕರಣಗಳ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಪೋಸ್ಟ್ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರವಣಿಗೆ ಇದೆ ಎಂದು ತಿಳಿಸಲಾಗಿತ್ತು. ಕ್ರೀಡಾಂಗಣದ ಗೇಟ್ ಸಂಖ್ಯೆ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು ಉಂಟಾಗಿ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರಿನಲ್ಲಿ ತಿಳಿಸಿದ್ದಾರೆ.
ಜೂ.5ರಂದು ಪೊಲೀಸ್ ಅಧಿಕಾರಿ ಗಿರೀಶ್ ನೀಡಿದ್ದ ದೂರಿನನ್ವಯ ಈಗಾಗಲೇ ಒಂದು ಎಫ್‍ಐಆರ್ ದಾಖಲಾಗಿತ್ತು.