ವಿಪಕ್ಷಗಳ ಪ್ರತಿಭಟನೆ ನಡುವೆ ಬಿ.ನಾಗೇಂದ್ರಗೆ ಮತ್ತೊಂದು ಖಾತೆ ಹಂಚಿಕೆ
Update: 2026-08-21 17:41 IST
ಬೆಂಗಳೂರು : ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನ ಮಂಡಲ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಬಿ.ನಾಗೇಂದ್ರಗೆ ಹೆಚ್ಚುವರಿ ಆಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲಾಗಿದೆ.
ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಐದನೇ ದಿನವೂ ವಿಪಕ್ಷಗಳಿಂದ ಪ್ರತಿಭಟನೆ ಮುಂದುವರೆದಿದೆ. ಇದರ ನಡುವೆ, ಸರಕಾರ ನಾಗೇಂದ್ರಗೆ ಹಾಲಿ ಯೋಜನೆ ಮತ್ತು ಸಾಂಖ್ಯಿಕ ಖಾತೆಯ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲಾಗಿದ್ದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.