×
Ad

ಭಯೋತ್ಪಾದನಾ ವಿರೋಧಿ ದಿನಾಚರಣೆ: ಪ್ರತಿಜ್ಞಾವಚನ ಬೋಧಿಸಿದ ಸಿಎಂ ಸಿದ್ದರಾಮಯ್ಯ

Update: 2026-05-21 14:33 IST

ಬೆಂಗಳೂರು: ಭಯೋತ್ಪಾದನಾ ವಿರೋಧಿ ದಿನದ ಆಚರಣೆ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಯೋತ್ಪಾದನಾ ವಿರೋಧಿ ದಿನದ “ಪ್ರತಿಜ್ಞಾವಚನ” ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪಾರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News