×
Ad

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಎ.ಪಿ ಉಸ್ತಾದ್

Update: 2023-09-11 12:54 IST

ಬೆಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. 

ರವಿವಾರ ಅರಮನೆ ಮೈದಾನದಲ್ಲಿ ನಡೆದ‌  ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್(ಎಸ್ಸೆಸ್ಸೆಫ್) 50ನೆ ವರ್ಷಾಚರಣೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಅವರು, ಇಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿಯಾದರು. 

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಮೌಲಾನ ಶಾಫಿ ಸ ಅದಿ ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News