×
Ad

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ನ.20ಕ್ಕೆ ಮುಂದೂಡಿಕೆ

Update: 2024-09-18 15:33 IST

ಬೆಂಗಳೂರು: ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ ಎಸ್ ಆರ್ ಪಿ) ಅನ್ನು ಇನ್ನೂ ಅಳವಡಿಸದವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಕಾಮೇಶ್ವರ ರಾವ್ ಮತ್ತು ಕೆ.ರಾಜೇಶ್ ರೈ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ, ಮುಂದಿನ ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿದೆ.

ಜತೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವನ್ನೂ ವಿಸ್ತರಣೆ ಮಾಡಿ ಆದೇಶ ಪ್ರಕಟಿಸಿದೆ. ಈ ಹಿಂದೆ ಸಾರಿಗೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ, ಸೆಪ್ಟೆಂಬರ್ 15ಕ್ಕೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಕೊನೆಯ ದಿನವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News