814 ಪಿಯು ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ (AI)
ಬೆಂಗಳೂರು : ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.
ಅರ್ಜಿ ಸಲ್ಲಿಸಲು ಡಿ.25 ಹಾಗೂ ಶುಲ್ಕ ಪಾವತಿಸಲು ಡಿ.26 ಕೊನೆ ದಿನವಾಗಿದೆ. ಒಟ್ಟು ಉಪನ್ಯಾಸಕರ ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದ 36 ಹುದ್ದೆಗಳು ಸೇರಿವೆ. ಸ್ನಾತಕೋತ್ತರ ಪದವಿ ಜತೆಗೆ ಬಿಇಡಿ ಮಾಡಿರುವವರು ಅರ್ಜಿ ಸಲ್ಲಿಸಬಹುದು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಕನ್ನಡ ವಿಷಯದಲ್ಲಿ 89 ಹುದ್ದೆ, ಇಂಗ್ಲಿಷ್-145, ಇತಿಹಾಸ- 50, ಅರ್ಥಶಾಸ್ತ್ರ- 90, ರಾಜ್ಯಶಾಸ್ತ್ರ- 25, ಸಮಾಜಶಾಸ್ತ್ರ- 25, ಭೂಗೋಳ ಶಾಸ್ತ್ರ- 10, ವಾಣಿಜ್ಯ ಶಾಸ್ತ್ರ- 150, ಭೌತಶಾಸ್ತ್ರ- 30, ರಸಾಯನಶಾಸ್ತ್ರ- 30, ಗಣಿತ- 30, ಜೀವಶಾಸ್ತ್ರ- 30, ಕಂಪ್ಯೂಟರ್ ಸೈನ್ಸ್- 110 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ ಸೇರಿದಂತೆ ಇತರ ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.