ಸಾಂದರ್ಭಿಕ ಚಿತ್ರ (AI)

ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಈಗಾಗಲೇ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ, ಸೇರ್ಪಡೆ ಅಧಿಸೂಚನೆ ಪ್ರಕಟಿಸಿದ್ದು, 867 ಉರ್ದು ಮತ್ತು 38 ಮರಾಠಿ ಶಿಕ್ಷಕ ಹುದ್ದೆಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

ಉರ್ದು ಭಾಷಾ ಶಿಕ್ಷಕ, ಮರಾಠಿ ಭಾಷಾ ಶಿಕ್ಷಕ, ಉರ್ದು ಮಾಧ್ಯಮದ ಗಣಿತ ಮತ್ತು ವಿಜ್ಞಾನ ಶಿಕ್ಷಕ, ಜೀವವಿಜ್ಞಾನ ಶಿಕ್ಷಕ, ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗಳಿಗೆ ಹಾಗೂ ಮರಾಠಿ ಮಾಧ್ಯಮದ ಗಣಿತ, ವಿಜ್ಞಾನ, ಜೀವ ವಿಜ್ಞಾನ, ಸಮಾಜ ವಿಜ್ಞಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಡಿ.21ರ ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಪಾವತಿಸಿರುವ ಶುಲ್ಕವನ್ನು ಖಚಿತಪಡಿಸಿಕೊಳ್ಳಲು ಡಿ.23ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 080-22483145, 22483140, 9449588020ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor