×
Ad

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ ವಾಪಾಸ್ ; ರಾಜ್ಯದ ನೂತನ ಚುನಾವಣಾ ಆಯುಕ್ತರಾಗಿ ನೇಮಕ

Update: 2024-06-28 20:42 IST

ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಗುರುವಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದ್ದು, ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿಯುವರು, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಗುರುವಾರ ನೇಮಕ ಮಾಡಲಾಗಿತ್ತು. ಈ ಸಂಬಂಧ ಹೊರಡಿಸಿದ್ದ ಆದೇಶವನ್ನು ಒಂದೇ ದಿನಕ್ಕೆ ಹಿಂಪಡೆಯಲಾಗಿದೆ.

ರಾಜ್ಯ ಸರ್ಕಾರದ ಶಿಫಾರಸಿನಂತೆ ಸಂಗ್ರೇಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮುಂದಿನ ಐದು ವರ್ಷಗಳವರೆಗೆ ಅವರ ಅಧಿಕಾರವಧಿ ಇರಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News