×
Ad

ನಿಗಮ ಮಂಡಳಿಗಳ ನೇಮಕಾತಿ; ಸಂಭಾವ್ಯರ ಪಟ್ಟಿ ವರಿಷ್ಠರಿಗೆ ರವಾನಿಸಲಾಗಿದೆ: ಸಿಎಂ ಸಿದ್ದರಾಮಯ್ಯ

Update: 2023-11-28 21:23 IST

ಬೆಂಗಳೂರು: ‘ನಿಗಮ ಮಂಡಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಸಂಬಂಧ ಕೇಂದ್ರ ನಾಯಕರಿಗೆ ಪಟ್ಟಿ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರೊಂದಿಗೆ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಟ್ಟಿ ವರಿಷ್ಠರಿಗೆ ರವಾನಿಸಲಾಗಿದೆ. ಹೈಕಮಾಂಡ್ ಅನುಮತಿ ನೀಡಿದ ನಂತರ ನಿಗಮ, ಮಂಡಳಿಗೆ ನೇಮಕಾತಿ ಮಾಡಲಾಗುವುದು ಎಂದು ಸ್ಪಷ್ಟಣೆ ನೀಡಿದರು.

ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ಕಲ್ಪಿಸಲಾಗುವುದು. 2 ಮತ್ತು ಮೂರನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ. ನಿಮಗ ಮಂಡಳಿ ನೇಮಕಾತಿಯಿಂದ ಪಕ್ಷಕ್ಕೆ ಅನುಕೂಲ ಆಗಲಿದೆ ಎಂದು ಸಿದ್ದರಾಮಯ್ಯ ವಿವರಣೆ ನೀಡಿದರು.

ನ.21ರಂದು ಬೆಂಗಳೂರಿಗೆ ಆಗಮಿಸಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭೆ ನಡೆಸಿದ್ದರು. ಆದರೆ, ಸಂಭಾವ್ಯರ ಪಟ್ಟಿ ಸಿದ್ದಪಡಿಸಲಾಗಿತ್ತು. ಆದರೆ, ಕೆಲ ಗೊಂದಲಗಳ ಕಾರಣ ಇಂದು ಪುನಃ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News