×
Ad

ವಿಧಾನಸಭೆ, ವಿಧಾನ ಪರಿಷತ್ ಗೆ ಆಡಳಿತ ಪಕ್ಷದ ಮುಖ್ಯ ಸಚೇತಕರ ನೇಮಕ

Update: 2023-07-03 11:12 IST

 ಅಶೋಕ ಪಟ್ಟಣ | ಸಲೀಂ ಅಹ್ಮದ್

ಬೆಂಗಳೂರು, ಜು. 3: ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ್ ಪಟ್ಟಣ್ ಅವರು ನೇಮಕ ಮಾಡಲಾಗಿದೆ.

ಸೋಮವಾರ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಅಶೋಕ್ ಪಟ್ಟಣ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧಿಕೃತವಾಗಿ ಪ್ರಕಟಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಶೋಕ್ ಪಟ್ಟಣ್ ಅವರು, ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಅವಧಿಯಲ್ಲಿಯೂ ಆಡಳಿತ ಪಕ್ಷದ ಸಚೇತಕರಾಗಿ ಅಶೋಕ್ ಪಟ್ಟಣ್ ಕಾರ್ಯನಿರ್ವಹಿಸಿದ್ದು, ಇದೀಗ ಮತ್ತೊಮ್ಮೆ ಅದೇ ಹುದ್ದೆಗೆ ನೇಮಕ ಮಾಡಲಾಗಿದೆ.

ಪರಿಷತ್ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ 

ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ.

ಸಲೀಂ ಅಹ್ಮದ್ ಅವರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಕರ್ನಾಟಕ ಪ್ರದೇಶದ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾರ್ಯಾಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News