ನೇತ್ರಾವತಿ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಅನುಮೋದನೆ
Update: 2024-12-06 20:55 IST
ಸಾಂದರ್ಭಿಕ ಚಿತ್ರ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಮಂಗಳೂರು-ಚೆರ್ವತ್ತೂರು–ಕರಾವಳಿ ಜಿಲ್ಲಾ ಮುಖ್ಯ ರಸ್ತೆಯ (ಕೋಟೆಪುರದಿಂದ-ಬೋಳಾವರೆಗೆ) ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 200 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಮತ್ತು ತುಂಬೆ ಗ್ರಾಮದ ಮಧ್ಯೆ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿ 60 ಕೋಟಿ ರೂ.ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.