×
Ad

ಅರಸೀಕೆರೆ: ಭಾರೀ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆ ಮೃತ್ಯು

Update: 2023-07-26 13:22 IST

ಅರಸೀಕೆರೆ (ಹಾಸನ): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ವೃದ್ಧೆಯೋರ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಕಣಕಟ್ಟೆ ಸಮೀಪ ಗಾಂಧಿನಗರ ಗ್ರಾಮದಲ್ಲಿ ಬುಧವಾರ ವರದಿಯಾಗಿದೆ. 

ಮೃತರನ್ನು ಗೌರಮ್ಮ (62) ಎಂದು ಗುರುತಿಸಲಾಗಿದೆ. ಮೃತರ ಪತಿ ನಟರಾಜ್ ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಗೌರಮ್ಮ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ಜೆಸಿ ಪುರ ಆಸ್ಪತ್ರೆಯಲ್ಲಿ ನಡೆಯಿತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ನಡೆದಿ ಸ್ಥಳಕ್ಕೆ ಶಾಸಕ ಕೆ,ಎಂ ಶಿವಲಿಂಗೇಗೌಡ, ಜಿಲ್ಲಾಧಿಕಾರಿಗಳಾದ ಸಿ, ಸತ್ಯಭಾಮ ತಹಶೀಲ್ದಾರ್ ಸೇರಿದಂತೆ ಹಲವರು ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಶಾಸಕ ಕೆ,ಎಂ ಶಿವಲಿಂಗೇಗೌಡ ಮಾತನಾಡಿ, 'ಮೃತ ಗೌರಮ್ಮ ಹಾಗೂ ಗಾಯಗೊಂಡಿರುವ ಅವರ ಪತಿ ನಟರಾಜ್ ಅವರಿಗೆ ಸರ್ಕಾರದಿಂದ ದೊರೆಯುವ ಸೂಕ್ತ ಪರಿಹಾರವನ್ನು ತ್ವರಿತವಾಗಿ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ' ಎಂದು ತಿಳಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News