×
Ad

ಒಡಿಶಾದಲ್ಲಿ ಆರೋಪಿ ಹಾಲಶ್ರೀ ಸ್ವಾಮೀಜಿಯ ಬಂಧನ

Update: 2023-09-19 11:31 IST

ಬೆಂಗಳೂರು, ಸೆ.19: ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ MLA ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾ ರಾಜ್ಯದಲ್ಲಿ ಬಂಧಿಸಿದ್ದಾರೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್ ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.

ಈ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News