×
Ad

ಮಡಿಕೇರಿ: ಕಾಫಿ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ

Update: 2023-08-07 14:20 IST

ಬಂಧಿತ ಆರೋಪಿ 

ಮಡಿಕೇರಿ ಆ.7 : ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಬೆಳೆದಿದ್ದ 31 ಕೆಜಿ 900 ಗ್ರಾಂ ತೂಕದ ಮಾದಕ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತ ಅನೂಪ್ ಮಾದಪ್ಪ, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್‍ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News