×
Ad

ಅನಂತಕುಮಾರ್‌ ಕುಂಭಕರ್ಣನಿದ್ದಂತೆ; ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು: ಕಾಂಗ್ರೆಸ್‌ ವ್ಯಂಗ್ಯ

Update: 2024-01-15 13:37 IST

ಬೆಂಗಳೂರು: ಸಂಸದ ಅನಂತಕುಮಾರ್‌ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಈ ಕುರಿತು 'ಎಕ್ಸ್‌' ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌, ಸಂಸದ ಅನಂತಕುಮಾರ್‌ ಹೆಗಡೆ ಅವಹೇಳನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದೆ.

"ಸಂಸದ ಅನಂತಕುಮಾರ್‌ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು" 

"ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್ ಗೆ ಸಂವಿಧಾನದಲ್ಲಿ ಔಷಧವಿದೆ" ಎಂದು ಕಾಂಗ್ರೆಸ್‌ ಹೇಳಿದೆ.

'ಕಾಂಗ್ರೆಸ್ ಪಕ್ಷದ ಬಗ್ಗೆ, ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ. ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ. ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ' ಎಂದು ಕಿಡಿಕಾರಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News