ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್.ಪೊನ್ನಣ್ಣ ನೇಮಕ
Update: 2026-08-12 18:32 IST
ಬೆಂಗಳೂರು : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಅಧಿಕೃತ ಹೊರಡಿಸಿದೆ.
ಆಗಸ್ಟ್ 12, 2026 ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ) ವಿಶೇಷ ಕಾರ್ಯದರ್ಶಿಗಳು ಹೊರಡಿಸಿರುವ ಈ ಅಧಿಸೂಚನೆಯ ಪ್ರಕಾರ, ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು ಮುಂದಿನ ಆದೇಶದವರೆಗೆ ಮುಂದುವರಿಯಲಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಎ.ಎಸ್. ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.