×
Ad

ಗದ್ದಲದ ನಡುವೆಯೂ ವಿಧಾನಸಭೆಯಲ್ಲಿ ʼಅರಮನೆ ಭೂಬಳಕೆ, ನಿಯಂತ್ರಣ ವಿಧೇಯಕʼ ಅಂಗೀಕಾರ

Update: 2025-03-06 23:37 IST

ಬೆಂಗಳೂರು : ವಿಪಕ್ಷಗಳ ಗದ್ದಲದ ನಡುವೆಯೇ 'ಬೆಂಗಳೂರು ಅರಮನೆ ಭೂಬಳಕೆ ಮತ್ತು ನಿಯಂತ್ರಣ ವಿಧೇಯಕ'ವನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.

ಬೆಂಗಳೂರು ಅರಮನೆ ಭೂಬಳಕೆ ಮತ್ತು ನಿಯಂತ್ರಣ ವಿಧೇಯಕವು ವಿಧಾನಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸರಕಾರ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಯಿತು.

'ರಾಜಕೀಯ ದ್ವೇಷದಿಂದ ಈ ವಿಧೇಯಕವನ್ನು ತರಲಾಗುತ್ತಿದ್ದು, ಸರಕಾರಕ್ಕೆ ಚಾಮುಂಡೇಶ್ವರಿ ದೇವಿಯ ಶಾಪ ತಟ್ಟಲಿದೆ' ಎಂದು ಬಿಜೆಪಿ ಸದಸ್ಯರು ವಾಗ್ದಾಳಿ ನಡೆಸಿದರು.

ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಜಾಗ ಸ್ವಾಧೀನಕ್ಕೆ ಬದಲಾಗಿ ಮೈಸೂರು ರಾಜಮನೆತನದ ವಾರಸುದಾರರಿಗೆ 3,014 ಕೋಟಿ ರೂ. ವರ್ಗಾವಣೆ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ಪರಿಹಾರ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

ಕೋರ್ಟ್ ಆದೇಶ ಪಾಲಿಸಿದರೆ ಸರಕಾರಕ್ಕೆ ದೊಡ್ಡ ಮಟ್ಟದ ನಷ್ಟ ಉಂಟಾಗುತ್ತದೆ ಎಂದು ಸರಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಇದನ್ನು ತಳ್ಳಿಹಾಕಿ ಟಿಡಿಆರ್ ಪರಿಹಾರ ನೀಡುವಂತೆ ಸೂಚಿಸಿತ್ತು. ಈ ನಡುವೆಯೇ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲು ಸರಕಾರ ಮಸೂದೆ ಮಂಡಿಸಿ ಅಂಗೀಕಾರ ಪಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News