×
Ad

ವಿಧಾನಸಭೆ ಚುನಾವಣೆ: ಛತ್ತೀಸ್‌ಗಢಕ್ಕೆ ಸಿಎಂ ಸಿದ್ದರಾಮಯ್ಯ ಸ್ಟಾರ್ ಪ್ರಚಾರಕ

Update: 2023-10-20 17:16 IST

ಸಿದ್ದರಾಮಯ್ಯ 

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ಇದೀಗ ಕಾಂಗ್ರೆಸ್‌ ಪಕ್ಷ ಛತ್ತೀಸ್‌ಗಢ ಚುನಾವಣೆಗೆ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದೆ.

40 ನಾಯಕರ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖರಾಗಿದ್ದಾರೆ.

ಅಲ್ಲದೇ, ಕರ್ನಾಟದಿಂದ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ  ಶ್ರೀನಿವಾಸ ಬಿ.ವಿ ಅವರ ಹೆಸರು ಪಟ್ಟಿಯಲ್ಲಿದೆ. 

ಛತ್ತೀಸ್‌ಗಢದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 7 ಹಾಗೂ ನವೆಂಬರ್ 17 ರಂದು ಇಲ್ಲಿ ಚುನಾವಣೆ ನಡೆಯಲಿದೆ.

 ಶ್ರೀನಿವಾಸ ಬಿ.ವಿ- ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News