×
Ad

ಎಟಿಎಂ ವಾಹನ ದರೋಡೆ ಪ್ರಕರಣ| ಆರೋಪಿಗಳ‌ ಸುಳಿವು ಸಿಕ್ಕಿದೆ : ಗೃಹ ಸಚಿವ ಜಿ.ಪರಮೇಶ್ವರ್‌

Update: 2025-11-19 19:48 IST

ಜಿ.ಪರಮೇಶ್ವರ್‌

ಬೆಂಗಳೂರು : ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಾರೆ. ಇದಕ್ಕೆ ಕಾರಣೀಕರ್ತರು ಯಾರು? ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದರೋ ಎಂಬುದರ ಬಗ್ಗೆ ಈವಾಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ‌ ಎಂದರು.

ಬೆಂಗಳೂರಿನಲ್ಲಿ ಹಾಡುಹಗಲಲ್ಲೇ ಇಂತಹ ಘಟನೆ ನಡೆದಿಲ್ಲ. ಏಳು‌ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹಣ ದರೋಡೆಯಾಗಿದೆ. ವಾಹನ ಸಂಖ್ಯೆ ಎಲ್ಲ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ? ಹೊರ ರಾಜ್ಯದಲ್ಲಿಯವರಾ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿ ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗುವುದಿಲ್ಲ. ಖಂಡಿತವಾಗಿ ಅವರನ್ನು ಹಿಡಿದು ಹಾಕುತ್ತೇವೆ ಎಂದು ಪ್ರತಿಕ್ರಿಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News