×
Ad

ಅತ್ತಿಬೆಲೆ ಪಟಾಕಿ ದುರಂತ | ಇನ್ನೋರ್ವ ಗಾಯಾಳು ಮೃತ್ಯು: ಸಾವಿನ ಸಂಖ್ಯೆ 16ಕ್ಕೆ ಏರಿಕೆ

Update: 2023-10-12 10:28 IST

ಆನೇಕಲ್, ಅ.12: ಇಲ್ಲಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಶನಿವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಮೃತರನ್ನು ಬೆಂಗಳೂರು ನಗರ ಜಿಲ್ಲೆಯ ಗಾರೆ ಭಾವಿಪಾಳ್ಯದ ನಿವಾಸಿ ವೆಂಕಟೇಶ್(25) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದ ಇವರು ಪ್ರವೃತ್ತಿಯಲ್ಲಿ ಬಾಡಿ ಬಿಲ್ಡರ್ ಆಗಿದ್ದರು. ಪರಿಚಯದವರ ಕಾರ್ಯಕ್ರಮಕ್ಕೆ ಪಟಾಕಿ ತರಲು ಸ್ನೇಹಿತನ ಜೊತೆಗೆ ಅತ್ತಿಬೆಲೆಗೆ ಹೋಗಿದ್ದರು. ಅದೇ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಸ್ನೇಹಿತ ಪಾರಾಗಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರಿಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಂಬಂದಿದೆ.

ದುರಂತದಲ್ಲಿ 14 ಮಂದಿ ಸಜೀವ ದಹನಗೊಂಡಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ತಮಿಳುನಾಡಿನ ದಿನೇಶ್ ಎಂಬ ಯುವಕ ಬುಧವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಆರು ಮಂದಿ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News