×
Ad

ಆಟೋರಿಕ್ಷಾ ಚಾಲಕನ ಕೊಲೆ

Update: 2023-09-07 18:07 IST

ಬೆಂಗಳೂರು, ಸೆ.7: ಮದ್ಯಪಾನ ಮಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಆಟೋ ಚಾಲಕನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಉಪ್ಪಾರಪೇಟೆಯ ಬಳೇಪೇಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬಳೇಪೇಟೆ ರಸ್ತೆಯ ವರನಟ ಡಾ.ರಾಜ್‍ಕುಮಾರ್ ಪ್ರತಿಮೆ ಬಳಿ ಸೆ.6ರ ಮಧ್ಯರಾತ್ರಿ ತುಮಕೂರು ಜಿಲ್ಲೆಯ ಹುಲಿಯೂರುದುರ್ಗ ಮೂಲದ ಆಟೋ ಚಾಲಕ ಸುರೇಶ್ ಎಂಬುವನನ್ನು ಕೊಲೆಗೈದಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆನ್ನಲಾಗಿದೆ.

ಆಟೋ ಚಾಲಕ ಸುರೇಶ್ ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ರಾತ್ರಿ ಗೆಳೆಯರ ಜೊತೆ ಕುಳಿತು ಪಾರ್ಟಿ ಮಾಡುತಿದ್ದ ವೇಳೆ ಶುರುವಾದ ಗಲಾಟೆಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಉಪ್ಪಾರಪೇಟೆ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News