×
Ad

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಆಯನೂರು ಮಂಜುನಾಥ್‌

Update: 2023-08-25 13:42 IST

ಬೆಂಗಳೂರು: ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಾಜಿ ಸಂಸದ ಆಯನೂರು ಮಂಜುನಾಥ್‌ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. 

ಶುಕ್ರವಾರ ಇಲ್ಲಿನ ಕುಮಾರ ಪಾರ್ಕ್‍ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ಮಂಜುನಾಥ್‌, ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು. 

ವಿಧಾನಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಆಯನೂರು ಮಂಜುನಾಥ್‌ ಅದಕ್ಕಾಗಿ ವಿಧಾನ ಪರಿಷತ್‌ನ ತಮ್ಮ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದರು. ಕೆಪಿಸಿಸಿ ಮಟ್ಟದಲ್ಲಿ ಒಪ್ಪಿಗೆ ಸಿಕ್ಕರೂ ಎಐಸಿಸಿಯಲ್ಲಿಅದಕ್ಕೆ ತಡೆ ಬಿದ್ದಿತ್ತು. ಹೀಗಾಗಿ ಕೊನೆಗೆ ಜೆಡಿಎಸ್‌ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಅವರು, ಮುಂಬರಲಿರುವ ಪದವೀಧರ ಕ್ಷೇತ್ರಗಳ ಚುನಾವಣೆಗೆ ಟಿಕೆಟ್  ಆಕಾಂಕ್ಷಿಯಾಗಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News