×
Ad

ಬಿ.ಎಲ್. ಸಂತೋಷ್ ಗೆ ಸ್ವಪಕ್ಷದ ಶಾಸಕರ ಸಂಪರ್ಕವೇ ಸಾಧ್ಯವಾಗಿಲ್ಲ: ಕಾಂಗ್ರೆಸ್ ವ್ಯಂಗ್ಯ

Update: 2023-09-01 14:36 IST

ಬೆಂಗಳೂರು:ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್. ಸಂತೋಷ್ ಹೇಳಿಕೆ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಟೀಕಿಸಿದೆ.

ಸಂತೋಷ್ ಅವರು ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್ ಎಂದು ವ್ಯಂಗ್ಯವಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News