×
Ad

ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು : ಏನಿದು ಪ್ರಕರಣ?

Update: 2024-06-07 12:25 IST

ರಾಹುಲ್ ಗಾಂಧಿ | PC : PTI  

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಬಿಜೆಪಿ ಸರ್ಕಾರ ಮಾಡಿದೆ ಎನ್ನಲಾದ ಶೇ.40 ಕಮಿಷನ್ ವಿರುದ್ಧ ಜಾಹೀರಾತು ನೀಡಿದ ಆರೋಪದಡಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಹಿತ  ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಕ್ರಮವಾಗಿ 2, 3 ಮತ್ತು 4ನೇ ಆರೋಪಿಗಳಾಗಿದ್ದಾರೆ.

ನ್ಯಾ. ಕೆ.ಎನ್. ಶಿವಕುಮಾರ್ ಅವರು ಜೂನ್ 7ರಂದು ತಪ್ಪದೆ ವಿಚಾರಣೆಗೆ ಹಾಜರಾಗಬೇಕು ಎಂದು ರಾಹುಲ್ ಅವರಿಗೆ ನಿರ್ದೇಶನ ನೀಡಿದ್ದರು. ಇದೇ ಪ್ರಕರಣದಲ್ಲಿ ಆರೋಪವನ್ನು ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 1ರಂದು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹೀಗಾಗಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

'2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ವೇಳೆ, ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ರೂ. 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ʼಭ್ರಷ್ಟ ಸರ್ಕಾರ' ಎಂದು ಆರೋಪಿಸಿತ್ತು.

'ಈ ಆರೋಪಕ್ಕೆ ಪಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ' ಎಂದು ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್.ಕೇಶವಪ್ರಸಾದ್ ಖಾಸಗಿ ದೂರು ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News