ರಾಜ್ಯದಲ್ಲಿ ʼಅನಲಾಗ್‌ ಪನೀರ್ʼ ತಯಾರಿಕೆ, ಮಾರಾಟ ನಿಷೇಧ; ಆದೇಶ

Update: 2026-08-22 12:47 IST

ಸಾಂದರ್ಭಿಕ ಚಿತ್ರ | PC : Image by atlascompany on Magnific

ಬೆಂಗಳೂರು : ಅನಲಾಗ್‌ ಪನೀರ್(ಕೃತಕ ಪನೀರ್‌) ಉತ್ಪಾದನೆ, ಸಂಗ್ರಹಣೆ, ಸಾಗಣೆ ಹಾಗೂ ಮಾರಾಟ ಮಾಡುವುದನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದಿಂದ ಸಾರ್ವಜನಿಕ ಅರೋಗ್ಯ ಮತ್ತು ಗ್ರಾಹಕರ ಹಿತಾಸಕ್ತಿಯಿಂದ ಈ ಆದೇಶ ಮಾಡಲಾಗಿದೆ.

ಹಾಲಿನ ಕೊಬ್ಬಿನ ಬದಲಿಗೆ ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರ ಡೇರಿಯೇತರ ಅಂಶಗಳನ್ನು ಬಳಸಿ ತಯಾರಿಸಿದ ಉತ್ಪನ್ನಗಳನ್ನು ‘ಪನೀರ್‌’ ಎಂದು ಲೇಬಲ್‌ ಮಾಡಿ ಮಾರಾಟ ಮಾಡುವಂತಿಲ್ಲ ಎಂದು ಇಲಾಖೆ ತಿಳಿಸಿದೆ. ಅದಾಗ್ಯೂ, ಫ್ರೋಜನ್‌ ಡೆಸರ್ಟ್‌, ಪ್ರೊಸೆಸ್ಡ್‌ ಚೀಸ್‌ ಮತ್ತು ಮಿಕ್ಸ್ಡ್‌ ಫ್ಯಾಟ್ ಸ್ಪ್ರೆಡ್‌ಗಳಿಗೆ ಈ ನಿಷೇಧ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಹೋಟೆಲ್‌, ರೆಸ್ಟೋರೆಂಟ್‌ಗಳೂ ಕೃತಕ ಪನೀರ್‌ ಅನ್ನು ಆಹಾರ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸುವುದು, ಸಂಗ್ರಹಿಸುವುದು, ಪೂರೈಸುವುದು ಅಥವಾ ಮಾರಾಟ ಮಾಡುವಂತಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಕಲಂ 30(2)(a), 18 ಮತ್ತು 29ರ ಅಡಿಯಲ್ಲಿ ಈ ಆದೇಶ ಮಾಡಲಾಗಿದೆ. ಪನೀರ್ ಎಂಬುದು ಹಾಲಿನಿಂದ ತಯಾರಿಸಲಾದ ಪ್ರಾಮಾಣೀಕೃತ ಆಹಾರ ಉತ್ಪನ್ನವಾಗಿದೆ. ಪನೀರ್‌ನಲ್ಲಿ ಹಾಲಿನ ಕೊಬ್ಬು ಪ್ರಮುಖ ಅಂಶವಾಗಿದ್ದು, ಅದರ ಬದಲಿಗೆ ಅಥವಾ ಅದರ ಜೊತೆಗೆ ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರೆ ನಾನ್-ಡೈರಿ ಪದಾರ್ಥಗಳನ್ನು ಬಳಸುವುದಕ್ಕೆ ಅನುಮತಿಯಿಲ್ಲ ಎಂದು ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News