×
Ad

ಸರಕಾರಿ ಬಸ್, ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧ

Update: 2026-01-30 20:28 IST

ರಾಮಲಿಂಗಾರೆಡ್ಡಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್‍ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಜಾಹೀರಾತನ್ನು ನಿರ್ಬಂಧ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಶುಕ್ರವಾರ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್‍ಗಳಲ್ಲಿ/ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಬೇಕು. ನಿಗದಿತ ಸಮಯದೊಳಗೆ ಇಂತಹ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News