×
Ad

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ʼಏಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್‌ʼ ಬಳಕೆ ನಿಷೇಧ

Update: 2023-10-28 22:50 IST

ಬೆಂಗಳೂರು: ರಾಜ್ಯಾದ್ಯಂತ ಆರೋಗ್ಯ ಇಲಾಖೆಯ ಎಲ್ಲಾ ಆರೋಗ್ಯ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲಿ 'ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್' ಬಳಕೆಯನ್ನು ನಿಷೇಧಿಸಿ ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಸರಕಾರಿ ಹಾಗೂ  ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ ವಿಶ್ವವಿದ್ಯಾನಿಲಯಗಳು, ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ- ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಬಾಟಲಿನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಸಾಮೂಹಿಕ ಕುಡಿಯುವ ನೀರು ವಿತರಣೆ ವ್ಯವಸ್ಥೆ ಏರ್ಪಡಿಸಲು ಸೆ.19ರಂದು ಸೂಚಿಸಲಾಗಿತ್ತು. ಆದರೆ ಆದೇಶವನ್ನು ಪಾಲಿಸದಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News