×
Ad

ಬೆಂಗಳೂರು | ಲಾರಿಗೆ ಢಿಕ್ಕಿ ಹೊಡೆದ ಆಂಬ್ಯುಲೆನ್ಸ್; ರೋಗಿ ಮೃತ್ಯು

Update: 2023-10-24 22:59 IST

ಬೆಂಗಳೂರು, ಅ.24: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ರೋಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನೆಲಮಂಗಲದ ಬೊಮ್ಮನಹಳ್ಳಿ ಸಮೀಪದಲ್ಲಿ ಮಂಗಳವಾರ ವರದಿಯಾಗಿದೆ.

ಚಿತ್ರದುರ್ಗ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುತ್ತಿರುವಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರೋಗಿ ವಿಜಯ್ ಕುಮಾರ್(30) ಎಂಬುವರು ಮೃತಪಟ್ಟಿದ್ದು, ಆಂಬುಲೆನ್ಸ್ ಚಾಲಕ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕ್ಯಾನ್ಸರ್‍ನಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಅವರನ್ನು ಆಂಬುಲೆನ್ಸ್ ಮೂಲಕ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕರೆ ತರಲಾಗುತ್ತಿತ್ತು. ವೇಗವಾಗಿ ಬರುತ್ತಿರುವಾಗ ಕಂಟೈನರ್ ಲಾರಿಗೆ ಆಂಬುಲೆನ್ಸ್ ಢಿಕ್ಕಿಯಾಗಿದೆ. ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.

ಘಟನಾ ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ವಾಹನಗಳನ್ನು ವಶಕ್ಕೆ ಪಡೆದು ಕ್ರಮ ಜರುಗಿಸಿರುವುದಾಗಿ ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News