ಬೆಂಗಳೂರು| 7 ಕೋಟಿ ರೂ. ದರೋಡೆ ಪ್ರಕರಣದ ಸೂತ್ರಧಾರ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಪೊಲೀಸ್ ವಶಕ್ಕೆ?
Update: 2025-11-21 11:30 IST
PC: x.com/prajwaldza
ಬೆಂಗಳೂರು: ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಎಜೆನ್ಸಿಯ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣದ ಮುಖ್ಯ ಸೂತ್ರಧಾರ ಎಂದು ಹೇಳಲಾಗುತ್ತಿರುವ ಕಾನ್ಸ್ಟೇಬಲ್ ಒಬ್ಬನನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ವಶಕ್ಕೆ ಪಡೆದಿರುವ ತನಿಖಾಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಣ್ಣಪ್ಪ ನಾಯ್ಕ್ ಕುಂಬಳಗೋಡು ಸೇರಿದಂತೆ ಹಲವು ಕಡೆ ಕಾನ್ಸ್ಟೆಬಲ್ ಕೆಲಸ ಮಾಡಿದ್ದರು ಎಂದು ವರದಿಯಾಗಿದೆ.
ದರೋಡೆಗೆ ಯುವಕರನ್ನು ಸಿದ್ಧಪಡಿಸಿದ್ದ ಅಣ್ಣಪ್ಪ ನಾಯ್ಕ್ ದರೋಡೆ ಕುರಿತು ತರಬೇತಿ ನೀಡಿದ್ದರು. ಕಾನ್ಸ್ಟೆಬಲ್ ಸೂಚನೆಯಂತೆ ಈ ತಂಡ ದರೋಡೆ ಮಾಡಿದೆ ಎನ್ನಲಾಗಿದೆ.