×
Ad

ಬೆಂಗಳೂರು ಗ್ರಾಮಾಂತರ| ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

Update: 2023-12-21 19:45 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ವಾಜರಹಳ್ಳಿಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ವರದಿಯಾಗಿದೆ.

ಡಿ.21ರಂದು ಈ ಘಟನೆ ಸಂಭವಿಸಿದ್ದು, ಗಾಯಗೊಂಡ ಸಂಜಯ್(40) ಹಾಗೂ ಲೇಖನಾ(05) ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ವಿಜಯಮ್ಮ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್‍ಮನ್ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿ ನಂದಿಸಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News