×
Ad

ಬೆಂಗಳೂರು: ತಂದೆ-ತಾಯಿಯನ್ನೇ ಹತ್ಯೆಗೈದ ಮಗ

Update: 2023-07-18 13:35 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.18 :ಯುವಕನೋರ್ವ ತಂದೆ-ತಾಯಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಕೊಡಿಗೆಹಳ್ಳಿ ವ್ಯಾಪ್ತಿಯ ಬ್ಯಾಟರಾಯನಪುರದಲ್ಲಿ ಮಂಗಳವಾರ ಬೆಳಗ್ಗೆ ವರದಿಯಾಗಿದೆ.

ಶರತ್ ಕೊಲೆಗೈದ ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಈತ ನಿನ್ನೆ(ಸೋಮವಾರ) ಸಂಜೆ ಕುಡಿದು ಬಂದು ಮನೆಯಲ್ಲಿ ತಂದೆ-ತಾಯಿ ಜೊತೆ ಗಲಾಟೆ ಮಾಡಿಕೊಂಡಿದ್ದು, ಆ ವೇಳೆ ಶಾಂತಾ ಹಾಗೂ ಭಾಸ್ಕರ್​ಗೆ ಮಾರಕಾಸ್ತ್ರದಿಂದ ಹೊಡೆದು ಹತ್ಯೆಗೈದಿದ್ದಾನೆ. ಬಳಿಕ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆನ್ನಲಾಗಿದೆ.

ಇಂದು (ಮಂಗಳವಾರ) ಬೆಳಗ್ಗೆ ಹಿರಿಯ ಮಗ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಆದರೆ, ಇಬ್ಬರೂ ಫೋನ್ ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾನೆ. ಆಗ ಪಕ್ಕದ ಮನೆಯವರು ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿನ್ನೆ(ಜುಲೈ 17) ಸಂಜೆ ಅಥವಾ ರಾತ್ರಿ ಸಮಯದಲ್ಲಿ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News