×
Ad

ದಸರಾ ಉದ್ಘಾಟನೆ | ಬಾನು ಮುಷ್ತಾಕ್‌ ಮೇಲಿನ ಗೌರವ ಹೆಚ್ಚಾಗಿದೆ : ಛಲವಾದಿ ನಾರಾಯಣಸ್ವಾಮಿ

Update: 2025-09-22 18:38 IST

ಬೆಂಗಳೂರು, ಸೆ.22: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿರುವ ಅಂತರ್‌ ರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಸೋಮವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದೂ ಸಂಸ್ಕೃತಿಗೆ ಗೌರವ ಕೊಟ್ಟು ಬಾನು ಮುಷ್ತಾಕ್‌ ಇವತ್ತು ನಡೆದುಕೊಂಡಿದ್ದಾರೆ. ಹೀಗಾಗಿ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ ಎಂದು ತಿಳಿಸಿದರು.

ಮುಸ್ಲಿಮ್ ಹೆಣ್ಣು ಮಗಳು ಹಿಂದೂ ಹೆಣ್ಣುಮಗಳಂತೆ ಅರಿಶಿಣ ಬಣ್ಣದ ಸೀರೆಯುಟ್ಟು ಹೂ ಮುಡಿದು ದೇವಸ್ಥಾನಕ್ಕೆ ಬಂದು, ಆರತಿ ಬೆಳಗಿ, ಮಂಗಳಾರತಿ ತೆಗೆದುಕೊಂಡಿದ್ದಾರೆ. ಇದು ಹಿಂದೂ ಸಂಸ್ಕೃತಿ ಪರವಾಗಿ ನಿಂತು ಅವರು ದಸರಾ ಉದ್ಘಾಟನೆ ಮಾಡಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News