×
Ad

'ಬರಗೂರು ಪ್ರಶಸ್ತಿ'ಗೆ ಕೋಟಿಗಾನಹಳ್ಳಿ ರಾಮಯ್ಯ, ಸುಂದರರಾಜ್ ಆಯ್ಕೆ

Update: 2023-07-01 20:35 IST

 ಕೋಟಿಗಾನಹಳ್ಳಿ ರಾಮಯ್ಯ

ಬೆಂಗಳೂರು, ಜು.1: ನಾಡೋಜ ಡಾ.ಬರಗೂರು ಪ್ರತಿಷ್ಟಾನದ ವತಿಯಿಂದ ಪ್ರತಿವರ್ಷವು ಸಾಹಿತ್ಯ ಮತ್ತು ಸಿನೆಮಾ ಕ್ಷೇತ್ರದ ತಲಾ ಒಬ್ಬರಿಗೆ ‘ಬರಗೂರು ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2022ನೇ ಸಾಲಿನ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಿಂದ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಸಿನೆಮಾ ಕ್ಷೇತ್ರದಿಂದ ಸುಂದರ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ 25 ಸಾವಿರ ರೂ. ನಗದನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜು.7ರಂದು ನಗರದ ಸರಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಟಾನದ ಕಾರ್ಯದರ್ಶಿ ಡಾ. ಎ.ವಿ.ಲಕ್ಷ್ಮೀನಾರಾಯಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News