×
Ad

ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ

Update: 2023-12-04 19:05 IST

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿ.7ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ವಾರ ಮೋಡ ಕವಿದ ವಾತಾವರಣವಿತ್ತು. ಈ ವಾರ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೆಚ್ಚಾಗಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆ ಕೂಡ ಬೀಳುತ್ತಿದೆ. ಇದರಿಂದ ಕೆಲಸಕ್ಕೆ ತೆರಳುವವರು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಕೂಡ ಉಂಟಾಗಿದೆ. ಇನ್ನು ಡಿ. 7ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಚಂಡಮಾರುತಕ್ಕೆ ಮೈಚುಂಗ್ ಎಂದು ಹೆಸರಿಸಲಾಗಿದೆ. ಗಂಟೆಗೆ 100 ಕಿ ಮೀ ವೇಗದಲ್ಲಿ ಮೈಚುಂಗ್ ಸಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೂ ಸೈಕ್ಲೋನ್ ತಟ್ಟಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News