×
Ad

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದು ಅವರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧ : ಯತ್ನಾಳ್‌

Update: 2025-08-24 13:14 IST

ಬಸನಗೌಡ ಪಾಟೀಲ್‌ ಯತ್ನಾಳ್‌/ಬಾನು ಮುಷ್ತಾಕ್‌

ಬೆಂಗಳೂರು : ʼನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆʼ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಬಾನು ಮುಷ್ತಾಕ್‌ ಅವರು ಸ್ಪಷ್ಟನೆ ನೀಡುವುದು ಅಗತ್ಯ ಎಂದು ಉಲ್ಲೇಖಿಸಿದ್ದಾರೆ.

ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News