×
Ad

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಉತ್ತೀರ್ಣತೆ ಅಂಕ ಇಳಿಕೆಗೆ ಬಸವರಾಜ ಹೊರಟ್ಟಿ ವಿರೋಧ

Update: 2025-10-30 14:55 IST

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ 

ಬೆಂಗಳೂರು: ಇತ್ತೀಚೆಗೆ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.33 ಅಂಕ ತೆಗೆದುಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ಸರಕಾರ ಆದೇಶಿಸಿದ್ದು, ಸರಕಾರದ ಈ ನಡೆಯನ್ನು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಖಂಡಿಸಿದ್ದಾರೆ.

ಬುಧವಾರ ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರವನ್ನು ಬರೆದಿರುವ ಅವರು, ಪರೀಕ್ಷೆಗಳನ್ನು ಉತ್ತೀರ್ಣ ಹೊಂದಲು ಈ ಹಿಂದಿನಿಂದ ನಿಗದಿ ಪಡಿಸಿರುವಂತೆ ಶೇ.35 ಅಂಕಗಳು ಸಮಂಜಸವಾಗಿದ್ದು, ದೀರ್ಘಕಾಲದಿಂದ ಸಾಭೀತಾದ ಮಾನದಂಡವಾಗಿರುತ್ತದೆ. ಇಂತಹ ಮಾನದಂಡವನ್ನು ಎಕಾಏಕಿ ಶೇ.33 ಅಂಕಗಳಿಗೆ ಕಡಿತಗೊಳಿಸುವಂತಹ ನಿರ್ಧಾರವು ಸಮಂಜಸವಾದುದಲ್ಲ ಎಂದಿದ್ದಾರೆ.

ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಶೇ.33 ಅಂಕ ತೆಗೆದುಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಮುಂಚೆ ಇದ್ದ ಪದ್ಧತಿಯನ್ನೇ ಸರಕಾರವು ಮುಂದುವರೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News