×
Ad

ಸಣ್ಣ ವ್ಯಾಪಾರಿಗಳಿಗೆ ಜಿಎಸ್‍ಟಿ ನೋಟಿಸ್ | ಸಿಎಂ ಮಧ್ಯಪ್ರವೇಶಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

Update: 2025-07-19 18:19 IST

ಬಸವರಾಜ ಬೊಮ್ಮಾಯಿ

ಬೆಂಗಳೂರು : ಕರ್ನಾಟಕದಲ್ಲಿ ಸಣ್ಣ ಮತ್ತು ಅತಿಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ನೋಟಿಸ್ ನೀಡಿರುವುದು ಖಂಡನೀಯ. ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ರಿಯಾಯ್ತಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಕೂಡಲೇ ಸಣ್ಣ ವ್ಯಾಪಾರಸ್ಥರಿಗೆ ಪರಿಹಾರ ಒದಗಿಸಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಶನಿವಾರ ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಸಣ್ಣ ಮತ್ತು ಅತಿಸಣ್ಣ ವ್ಯಾಪಾರಿಗಳ ವಿಚಾರದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ದುಡುಕಿ ಹಲವಾರು ವರ್ಷದ ತೆರಿಗೆ ಅದರ ಮೇಲೆ ಬಡ್ಡಿ ಮತ್ತು ಇತರ ಚಾರ್ಜ್ ಹಾಕಿ ಸಣ್ಣ ಬೀದಿಬದಿ ವ್ಯಾಪಾರಸ್ಥರ ಮೇಲೆ ದೊಡ್ಡ ಹೊರೆ ಹೊರೆಸಿ ಅವರು ವ್ಯಾಪಾರ ಮುಚ್ಚುವ ಸ್ಥಿತಿಗೆ ತಂದಿರುವುದು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಸಂಬಂಧ ಪಟ್ಟ-ಸಣ್ಣ ವ್ಯಾಪಾರಿಗಳ ಪ್ರತಿನಿಧಿಗಳನ್ನು ಕರೆದು ಚರ್ಚೆ ಮಾಡಿ ಅವರಿಗೆ ಎಲ್ಲ ರೀತಿಯ ರಿಯಾಯಿತಿಗಳನ್ನು ಕೊಟ್ಟು ಕರ ಸಮಾಧಾನ ಯೋಜನೆ ಅಡಿಯಲ್ಲಿ ಯಾವ ರೀತಿ ತೆರಿಗೆದಾರರಿಗೆ ಸಹಾಯ ಮಾಡುತ್ತೇವೊ ಅದೇ ರೀತಿ ಅವರಿಗೂ ಸಹಾಯ ಮಾಡಬೇಕು. ಬೇರೆ ರಾಜ್ಯಗಳಲ್ಲಿ ಈ ವಿಚಾರದಲ್ಲಿ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೆ. ಸಣ್ಣ ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ದೃಷ್ಟಿಯಿಂದ ಆ ಕ್ರಮ ಇಲ್ಲಿ ಅನ್ವಯಿಸಬೇಕೆಂದು ಆಗ್ರಹಿಸಿದರು.

ಹಣಕಾಸಿನ ತೊಂದರೆಯಾಗಿ ಬೊಕ್ಕಸ ಖಾಲಿಯಾಗಿರುವುದು ಮತ್ತು ಈ ವರ್ಷದ ಮೊದಲನೆಯ ತ್ರೈಮಾಸಿಕ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಗಾಬರಿಯಿಂದ ತೀವ್ರವಾದ ಕ್ರಮಕ್ಕೆ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News