×
Ad

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ದಿನವೇ ಕಾಂಗ್ರೆಸ್ ಮನೆಯಲ್ಲಿ ಬಿರುಕು ಶುರುವಾಯಿತು : ಬೊಮ್ಮಾಯಿ

"ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂದು ಈ ತಿಂಗಳು ಗೊತ್ತಾಗಲಿದೆ"

Update: 2025-11-24 14:38 IST

ಸಿದ್ದರಾಮಯ್ಯ/ಬಸವರಾಜ ಬೊಮ್ಮಾಯಿ

ಮೈಸೂರು : ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ. ಕಾಂಪ್ರಮೈಸ್ ಸಿದ್ದರಾಮಯ್ಯ ಆದರೆ ಬಿಟ್ಟುಕೊಡುತ್ತಾರೆ‌. ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ತಮ್ಮ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಗಲಿದೆ. ನಾವು ನೋಡಿದ ಸಿದ್ದರಾಮಯ್ಯ ಮೊದಲಿನಿಂದಲೂ ರೆಬೆಲಿಯನ್. ಅವರದ್ದು ಯಾವಗಲೂ ಗಟ್ಟಿ ಗಡಸುತನದ ರಾಜಕಾರಣ. ಅದೇ ಮೂಲ ಸಿದ್ದರಾಮಯ್ಯ ಈಗ ಅಧಿಕಾರದ ಆಸೆಗಾಗಿ ಬದಲಾಗಿದ್ದಾರಾ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.

ಬಿಜೆಪಿ ಸರಕಾರದ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರಕಾರದ ಮೇಲೆ ಕಮಿಷನ್ ಆರೋಪ ಮಾಡಿದ್ದು ಸುಳ್ಳು ಎಂಬುದು ತನಿಖಾ ವರದಿಯಿಂದ ಸಾಬೀತಾಗಿದೆ. ಈಗ ಅವರ ಸರಕಾರದದಲ್ಲಿ ಎಲ್ಲಾ ಇಲಾಖೆಯಲ್ಲಿ ಎಷ್ಟೆಷ್ಟು ಕಮಿಷನ್ ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ದಿನವೇ ಕಾಂಗ್ರೆಸ್ ಮನೆಯಲ್ಲಿ ಬಿರುಕು ಶುರುವಾಯಿತು. ಈಗ ಆ ಬಿರುಕು ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News